ಗಣೇಶ ಪೂಜೆ ಮಾಡಿದ್ದಕ್ಕೆ ಮೋದಿ ದೇಶದ ಕ್ಷಮೆ ಕೇಳಬೇಕು: ಉಗ್ರಪ್ಪ

Sampriya

ಶುಕ್ರವಾರ, 13 ಸೆಪ್ಟಂಬರ್ 2024 (19:42 IST)
Photo Courtesy X
ಬೆಂಗಳೂರು: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮನೆಯ ಗಣಪತಿ ಪೂಜೆಯಲ್ಲಿ ಪ್ರಧಾನಿಗಳು ಪೂಜೆ ಮಾಡಿ ಹೊಸ ಸಂಪ್ರದಾಯ ಹುಟ್ಟು ಹಾಕಿದ್ದಾರೆ. ದೇಶದ ಜನತೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ವಿಎಸ್ ಉಗ್ರಪ್ಪ ಆಗ್ರಹಿಸಿದರು.

ಕ್ವೀನ್ಸ್  ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ನ್ಯಾಯಮೂರ್ತಿಗಳ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಇರುವ ಅನೇಕ ಪ್ರಕರಣಗಳಿವೆ. ಮುಖ್ಯ ನ್ಯಾಯಮೂರ್ತಿಗಳು  ರಾಷ್ಟ್ರಪತಿ, ಉಪರಾಷ್ಟ್ರಪತಿ ಅಥವಾ ವಿರೋಧ ಪಕ್ಷದ ನಾಯಕರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆಯಬಹುದಿತ್ತು ಎಂದರು.

ಮಾನ್ಯ ಪ್ರಧಾನಿಗಳು ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಕೆಟ್ಟ ಸಂಪ್ರದಾಯವನ್ನು ಹುಟ್ಟು ಹಾಕಿದ್ದಾರೆ. ಜನರ ಭಾವನೆಗೆದ್ದಕ್ಕೆ ತಂದಿರುವ ಇವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದರು.

ನಾಗಮಂಗಲದ ಜನತೆ ಯಾವುದೇ ಪಕ್ಷಗಳ ಪ್ರಚೋದನೆಗೆ ಒಳಗಾಗಬಾರದು. ಸಮಾಜದ ಶಾಂತಿಯನ್ನು ಯಾವುದೇ ವ್ಯಕ್ತಿ, ಸಂಘಟನೆ ಸೇರಿದಂತೆ ಯಾರೂ ಸಹ ಹಾಳು ಮಾಡುವ ಕೆಲಸಕ್ಕೆ ಕೈ ಹಾಕಬಾರದು.

ಜನರು ಯಾವುದೇ ಪಕ್ಷ, ನಾಯಕರ ಪ್ರಚೋದನೆಗೆ ಒಳಗಾಗದೆ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಾರ್ಥನೆ ಮಾಡುತ್ತೇವೆ. ಕಾಂಗ್ರೆಸ್ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ