ಮೋದಿ ಉಪನಾಮ ಟೀಕೆ; ರಾಹುಲ್ ಗಾಂಧಿ

ಶುಕ್ರವಾರ, 24 ಮಾರ್ಚ್ 2023 (17:37 IST)
ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದಿರುವ ಗುಜರಾತ್​ನ ಸೂರತ್ ನ್ಯಾಯಾಲಯ, 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದೆ. 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿದೆ. 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದ ರ‍್ಯಾಲಿಯಲ್ಲಿ ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ರಾಹುಲ್‌ ವ್ಯಂಗ್ಯವಾಡಿದ್ದರು. ಈ ಸಂಬಂಧ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಸೂರತ್ ನ್ಯಾಯಾಲಯ ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.‌ ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡೂ ಕಡೆಯವರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ H.H. ವರ್ಮಾ, ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಬಳಿಕ ಜಾಮೀನು ಮಂಜೂರು ಮಾಡಿ, 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶ ನೀಡಿದರು. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್‌ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ