ಯೋಗ ದಿನಾಚರಣೆಗೆ ಮೈಸೂರಿಗೆ ಮೋದಿ

ಸೋಮವಾರ, 30 ಮೇ 2022 (13:05 IST)
ಈ ಬಾರಿಯ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ.

ಇದರಿಂದ ರಾಜ್ಯವು ವಿಶ್ವ ಮಟ್ಟದಲ್ಲಿ ಗಮನ ಸೆಳೆಯಲಿದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

 ‘ಹಲವು ಶಾಲಾ, ಕಾಲೇಜುಗಳು, ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ದೊಡ್ಡ ಪ್ರಮಾಣದಲ್ಲಿ ಯೋಗ ದಿನದ ಕಾರ್ಯಕ್ರಮ ಆಯೋಜಿಸಲಾಗುವುದು.

‘ಯೋಗದಿಂದ ಆರೋಗ್ಯ’ ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸುವ ಚಿಂತನೆ ಇದೆ. ಮೋದಿ ಅವರ ಮುಂದೆ ಯೋಗ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಮತ್ತು ಯೋಗ ಪ್ರಚಾರ ಮತ್ತು ಬೆಳವಣಿಗೆಗೆ ಏನು ಮಾಡಬೇಕೆಂಬ ಅಂಶಗಳನ್ನು ಅನಾವರಣ ಮಾಡಲಾಗುತ್ತದೆ’ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ