ಮೋದಿ 2 ಗಂಟೆ ನಿದ್ದೆ ಮಾಡ್ತಾರೆ, 22 ಗಂಟೆ ದೇಶಕ್ಕಾಗಿ ಎಚ್ಚರವಾಗಿರ‍್ತಾರೆ
ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿದಿನ ಎರಡು ಗಂಟೆಗಳ ಕಾಲ ಮಾತ್ರ ನಿದ್ದೆ ಮಾಡುತ್ತಾರೆ. ಅವರು ನಿದ್ದೆ ಮಾಡದೇ, ದೇಶಕ್ಕಾಗಿ 24 ಗಂಟೆಗಳ ಕಾಲ ಕೆಲಸ ಮಾಡಬಹುದು ಎಂದು ತೋರಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.ಕೊಲ್ಹಾಪುರ ಉತ್ತರ ವಿಧಾನಸಭಾ ಉಪಚುನಾವಣೆಯನ್ನುದ್ದೇಶಿ ಕೊಲ್ಲಾಪುರದಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಕೇವಲ ಎರಡು ಗಂಟೆ ಮಾತ್ರ ನಿದ್ದೆ ಮಾಡುತ್ತಾರೆ. ಪ್ರತಿದಿನ 22 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಅವರು ನಿದ್ರೆ ಮಾಡದೇ ಇರಬಹುದಾ ಎಂಬ ಪ್ರಯೋಗವನ್ನು ಈಗ ಮಾಡುತ್ತಿದ್ದಾರೆ.24 ಗಂಟೆಗಳ ಕಾಲ ಎಚ್ಚರವಾಗಿದ್ದು, ದೇಶಕ್ಕಾಗಿ ಕೆಲಸ ಮಾಡಲು ಮೋದಿ ಅವರು ನಿದ್ರೆಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಅವರು ಒಂದು ನಿಮಿಷವನ್ನೂ ವ್ಯರ್ಥ ಮಾಡುವುದಿಲ್ಲ. ಜೊತೆಗೆ ಪ್ರಧಾನಿಯವರು ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಾರೆ ಮತ್ತು ದೇಶದ ಯಾವುದೇ ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ತಿಳಿದಿರುತ್ತಾರೆ ಎಂದು ತಿಳಿಸಿದ್ದಾರೆ.