ವಿದ್ವತ್ ಹಲ್ಲೆ ಕೇಸ್: ಮೊಹಮ್ಮದ್ ನಲಪಾಡ್ ಗಿಲ್ಲ ಇಂದು ಬಿಡುಗಡೆ ಭಾಗ್ಯ
ಶುಕ್ರವಾರ, 23 ಫೆಬ್ರವರಿ 2018 (17:07 IST)
ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪರವಾಗಿ ಸಲ್ಲಿಸಿದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
ವಿದ್ವತ್ ಪರ ವಕೀಲರು ಮಧ್ಯಂತರ ಜಾಮೀನು ನೀಡುವುದಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ, ವಿದ್ವತ್ ಪರ ವಕೀಲರು ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದ್ದಾರೆ. ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಫೆಬ್ರವರಿ 26 ರವರೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ನಾಳೆ ಜಾಮೀನು ಅರ್ಜಿ ವಿಚಾರಣೆಗೆ ಬಂದರೂ ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು 26 ರವರೆಗೆ ಅವಕಾಶ ಕೊಟ್ಟಿರುವುದರಿಂದ ಅಲ್ಲಿಯವರೆಗೆ ನಲಪಾಡ್ ಗ್ಯಾಂಗ್ ಗೆ ಬಿಡುಗಡೆಯ ಭಾಗ್ಯ ಇರಲಾರದು. ಆರೋಪಿ ಪರ ವಕೀಲ ಟಾಮಿ ಸೆಬಾಸ್ಟಿಯನ್ ಮತ್ತು ವಿದ್ವತ್ ಪರ ವಕೀಲರ ವಾದ ವಿವಾದ ಆಲಿಸಿದ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲು ನಿರ್ಧರಿಸಿದೆ.
ಈ ನಡುವೆ ಆಲಂ ಪಾಷಾ ಎಂಬವರು ವಿದ್ವತ್ ಪರ ವಾದ ಮಂಡಿಸಲು ತಮಗೂ ಆದೇಶ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆದರೆ ಮೂರನೇ ವ್ಯಕ್ತಿಗೆ ಪ್ರಕರಣದಲ್ಲಿ ವಾದ ಮಂಡಿಸಲು ಅವಕಾಶ ನೀಡಬಾರದು ಎಂದು ಆರೋಪಿ ಪರ ವಕೀಲರು ವಾದಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ