ಮೊಹಮ್ಮದ್ ನಲಪಾಡ್ ಗೆ ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ಸಿಗದಂತೆ ಸಿಸಿಬಿ ಪ್ಲ್ಯಾನ್?!

ಶನಿವಾರ, 17 ಮಾರ್ಚ್ 2018 (10:39 IST)
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆಗೆ ಸಂಬಂದಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮೊಹಮ್ಮದ್ ನಲಪಾಡ್ ಹೈಕೋರ್ಟ್ ನಲ್ಲಿ ಜಾಮೀನು ಸಿಗದ ಕಾರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯಿದೆ.
 

ಆದರೆ ಸುಪ್ರೀಂ ಕೋರ್ಟ್ ನಲ್ಲೂ ಮಧ್ಯಂತರ ಜಾಮೀನು ಸಿಗದಂತೆ ಮಾಡಲು ಸಿಸಿಬಿ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ. ಮಾರ್ಚ್ 19 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಲು ಸಿಸಿಬಿ ಅಧಿಕಾರಿಗಳು ಯೋಜನೆ ನಡೆಸಿದ್ದಾರೆ.

ಜಾಮೀನು ಅರ್ಜಿ ವಿಚಾರಣೆ ನಡೆಯುವ ಮೊದಲು ಕೇವಿಯಟ್ ಸಲ್ಲಿಸಿ ಅಭಿಪ್ರಾಯ ಆಲಿಸಲು ಸಿಸಿಬಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ನಲಪಾಡ್ ಗೆ ಸದ್ಯಕ್ಕೆ ಕಂಟಕ ಮುಗಿದಂತೆ ಕಾಣುತ್ತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ