ಬ್ರಿಟನ್‌ನಲ್ಲಿ ಮಂಕಿಪಾಕ್ಸ್ ಕೇಸ್ ಪತ್ತೆ..!
ಕೊರೋನಾ ಹಾವಳಿ ನಡುವೆಯೇ ನೈಜೀರಿಯಾದಿಂದ ಇತ್ತೀಚೆಗೆ ಬ್ರಿಟನ್‌ಗೆ ಮರಳಿದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ವೈರಸ್ ಸೋಂಕು ಪತ್ತೆಯಾಗಿದೆ. ಮಂಕಿಪಾಕ್ಸ್ ಎಂಬುದು ಅಪರೂಪದ ವೈರಲ್ ಸೋಂಕಾಗಿದ್ದು, ರೋಗಗ್ರಸ್ಥ ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಸೌಮ್ಯ ಲಕ್ಷಣಗಳಿದ್ದ ರೋಗಿಗಳು ಕೆಲವೇ ವಾರಗಳಲ್ಲಿ ಚೇತರಿಸಿಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ಮಾತ್ರ ಇದು ತೀವ್ರ ಅನಾರೋಗ್ಯಕ್ಕೆ ಕಾರಣವಾಗುತ್ತೆ..ಆದ್ರೆ, ಇದು ಮನುಷ್ಯರಿಂದ ಮನುಷ್ಯರಿಗೆ ಸುಲಭವಾಗಿ ಹರಡುವುದಿಲ್ಲ. ಹೀಗಾಗಿ ಸೋಂಕು ಸಾರ್ವಜನಿಕರಿಗೆ ಹರಡುವ ಸಾಧ್ಯತೆ ಅತ್ಯಂತ ಕಡಿಮೆಯಿದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ..ಅಲ್ಲದೇ, ಮುನ್ನೆಚ್ಚರಿಕೆ ಕ್ರಮವಾಗಿ ರೋಗಿಯೊಂದಿಗೆ ಸಂಪರ್ಕದಲ್ಲಿರುವವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.