ರಾಜ್ಯದಲ್ಲಿ ಮುಂಗಾರು ಮಳೆ ಚುರುಕು

ಭಾನುವಾರ, 9 ಜುಲೈ 2023 (17:37 IST)
ಸಿಲಿಕಾನ್ ಸಿಟಿ ಈ ವಾರ ತಂಪು ತಂಪು, ಕೂಲ್‌ ಕೂಲ್‌ ಆಗಿದೆ. ಬೆಳಗ್ಗೆಯಿಂದಲೇ ಜಿಟಿ ಜಿಟಿ ಮಳೆ ಶುರುವಾಗಿದೆ.ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಶೀತದ ಹವಾಮಾನ, ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.ಕಳೆದ ಮೂರು ದಿನಗಳಿಂದ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.ಮುಂದಿನ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಜುಲೈ 11 ಮತ್ತು 12 ರಂದು ಗುಡುಗು ಸಹಿತ ಭಾಗಶಃ ಮಳೆ IMD ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿನ ಕರ್ನಾಟಕದ ಭಾಗಮಂಡಲದಲ್ಲಿ ಅತಿ ಹೆಚ್ಚು 23 ಸೆಂ.ಮೀ ಮಳೆಯಗಲಿದೆ.ವಿರಾಜಪೇಟೆಯಲ್ಲಿ 12 ಸೆಂ.ಮೀ ಮತ್ತು ಕೊಟ್ಟಿಗೆಹಾರ ಶೃಂಗೇರಿಯಲ್ಲಿ 7 ಸೆಂ.ಮೀ. ಮಳೆಯಾಗಲಿದೆ.ಕರಾವಳಿ ಜಿಲ್ಲೆಗಳು, ಕೊಡಗು ಮತ್ತು ಶಿವಮೊಗ್ಗದಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.ರಾಜ್ಯದ ಡ್ಯಾಂಗಳಿಗೂ ಭಾರಿ ಪ್ರಮಾಣದ ನೀರು ಸಂಗ್ರಹಣೆ ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ