ನಾಳೆಯಿಂದ ಮಳೆಗಾಲದ ಅಧಿವೇಶನ: ಸರಕಾರದ ತರಾಟೆಗೆ ಪ್ರತಿಪಕ್ಷಗಳು ಸಜ್ಜು

ಭಾನುವಾರ, 4 ಜೂನ್ 2017 (16:12 IST)
ನಾಳೆಯಿಂದ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.
 
ನಾಳೆಯಿಂದ ಜೂನ್ 16 ರವರೆಗೆ ನಡೆಯಲಿರುವ ವಿಧಾನಸಭೆಯ ಅಧಿವೇಶನದಲ್ಲಿ ಪ್ರತಿಪಕ್ಷಗಳು ಬರಗಾಲ ಪರಿಸ್ಥಿತಿ ನಿರ್ವಹಣೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಲಿವೆ.
 
ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವು, ಮೇಟಿ ಪ್ರಕರಣ, ಗೋಹತ್ಯೆ, ಬರಗಾಲ ವಿಷಯಗಳ ಕುರಿತಂತೆ ಪ್ರತಿಪಕ್ಷಿಗಳು ಸದನದಲ್ಲಿ ಕೋಲಾಹಲ ಎಬ್ಬಿಸಲಿವೆ ಎಂದು ಪ್ರತಿಪಕ್ಷಗಳ ಮುಖಂಡರು ತಿಳಿಸಿದ್ದಾರೆ.
 
ಸರಕಾರದ ವೈಫಲ್ಯಗಳ ವಿರುದ್ಧ ಪಟ್ಟಿ ಮಾಡಿರುವ ವಿಪಕ್ಷಗಳು ಸಿಎಂ ಸಿದ್ದರಾಮಯ್ಯನವರನ್ನು ಗೊಂದಲಕ್ಕೆ ಸಿಲುಕಿಸಲು ಸೆಡ್ಡುಹೊಡೆದಿವೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ