ಇನ್ನೊಂದು ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ

ಶನಿವಾರ, 30 ಮೇ 2020 (09:27 IST)
Normal 0 false false false EN-US X-NONE X-NONE

ಬೆಂಗಳೂರು : ಇನ್ನೊಂದು ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 


 

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಇರುವ ಹಿನ್ನಲೆಯಲ್ಲಿ ಈಗ ದಕ್ಷಿಣ ಒಳನಾಡಿನಲ್ಲಿ ಪ್ರತಿನಿತ್ಯ ಮಳೆಯಾಗುತ್ತಿದೆ. ಹಾಗೂ ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನಲೆ ಮುಂಗಾರು ಆರಂಭಕ್ಕೆ ಅನುಕೂಲಕರವಾದ ವಾತಾವರಣವಿದೆ. ಆದಕಾರಣ ಜೂನ್ 1 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.

 

ನಂತರ 2-3 ದಿನದಲ್ಲಿ ರಾಜ್ಯದ ಕರಾವಳಿಗೆ ಮುಂಗಾರು ಎಂಟ್ರಿಯಾಗಲಿದ್ದು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಹಾಗೇ  ಇಂದಿನಿಂದ 3 ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ