ಕರ್ನಾಟಕ ಸಂಪತ್ಭರಿತವಾದ ರಾಜ್ಯ. ಆದರೆ, ಇದನ್ನು ಸದುಪಯೋಗ ಮಾಡುವುದನ್ನು ಬಿಟ್ಟು, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಕೊಳ್ಳೆ ಹೊಡೆಯುತ್ತಿದ್ದಾರೆ. ಅಧಿಕಾರಿಗಳು ತಮ್ಮ ಮೂಲ ಸ್ಥಾನಗಳಲ್ಲಿ ಸಾವಿರ ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆಂದು ಮಾಹಿತಿ ಇದೆ. ಅದಕ್ಕಾಗಿ ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಉತ್ತರ ಭಾರತ ಮೂಲದ ಅಧಿಕಾರಿಗಳಿಗೆ ಪ್ರಾಮುಖ್ಯ ನೀಡದೆ ನಮ್ಮ ರಾಜ್ಯದ ಅಧಿಕಾರಿಗಳಿಗೆ ಆಧ್ಯತೆ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.