ದೀಪಾವಳಿ ಹಬ್ಬಕ್ಕೆ ಬಂದು ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಅ.30 ಮತ್ತು 31ರಂದು ಬೆಂಗಳೂರು, ಮಂಗಳೂರು, ಹೈದರಾಬಾದ್, ಪಣಜಿ, ಪುಣೆ, ಮುಂಬೈ ಮತ್ತು ಇನ್ನಿತರ ಪ್ರಮುಖ ನಗರಗಳಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಸ್ವಂತ ಊರುಗಳಿಗೆ ತೆರಳುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಒಟ್ಟು 600ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.
ಹಬ್ಬ ಮುಗಿದ ನಂತರ ಬೆಂಗಳೂರು ಮತ್ತು ಇತರ ನಗರಗಳಿಗೆ ತೆರಳುವ ಪ್ರಯಾಣಿಕರಿಗಾಗಿ ನ.5 ಮತ್ತು 7 ರಂದು ಸಹ ಬೇಡಿಕೆಗನುಗುಣವಾಗಿ ಹೆಚ್ಚುವರಿ ವಿಶೇಷ ಸಾರಿಗೆ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಮುಂಗಡ ಟಿಕೆಟ್‌ಗಳನ್ನು ಕೆ.ಎಸ್.ಆರ್.ಟಿ.ಸಿ ಮೊಬೈಲ್ ಆಯಪ್ ಹಾಗೂ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಮಾಡಬಹುದಾಗಿದೆ. ಕೋವಿಡ್ ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾ.ಕ.ರ.ಸಾ. ಸಂಸ್ಥೆಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.