ಬಸ್ ಉರುಳಿ 20ಕ್ಕೂ ಹೆಚ್ಚು ಜನರಿಗೆ ಗಾಯ..!
ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಎದುರಿನಿಂದ ಬಂದ ಲಾರಿಗೆ ದಾರಿ ಬಿಡುವಾಗ ಬಸ್ ಉರುಳಿ ಬಿದ್ದಿದೆ. ಗಾಯಾಳುಗಳಿಗೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.