ಬೆಂಗಳೂರು: ಮುಂಗಾರು ಮಳೆ ರಾಜ್ಯ ಪ್ರವೇಶಿಸಿದ್ದು ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮರಗಳು ಧರೆಗುರುಳಿವೆ.
ಶನಿವಾರದಿಂದ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆಯೂ ಮಳೆ ಮುಂದುವರಿದಿತ್ತು. ಇಂದೂ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು ಮಳೆ ಬರುವ ಎಲ್ಲಾ ಲಕ್ಷಣಗಳಿವೆ.
ಮಳೆಯ ಜೊತೆಗೆ ವಿಪರೀತ ಗಾಳಿಯೂ ಸೇರಿರುವುದರಿಂದ ಹಲವೆಡೆ ಮರಗಳು ಧರೆಗುರುಳಿ ಅವಾಂತರ ಸೃಷ್ಟಿಯಾಗಿದೆ. ಕೇವಲ ಎರಡು ದಿನದ ಮಳೆಗೆ 200 ಕ್ಕೂ ಹೆಚ್ಚು ಮರಗಳು ಉರುಳಿಬಿದ್ದಿವೆ. ಕೆಲವೆಡೆ ಅಂಡರ್ ಪಾಸ್ ನಲ್ಲಿ ನೀರು ನಿಂತು ವಾಹನ ಸಂಚಾರ ಕಷ್ಟವಾಗಿದೆ.
ಬೆಂಗಳೂರು ನಗರದಲ್ಲಿ ಒಟ್ಟಾರೆ 110.7 ಮಿಲಿ ಲೀಟರ್ ಮಳೆಯಾಗಿದೆ. ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಮೊನ್ನೆಯಷ್ಟೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು ರಾಜ್ಯಾದ್ಯಂತ ಈಗ ಮಳೆಯಾಗುತ್ತಿದೆ.