ಯುಗಾದಿ ಹಬ್ಬಕ್ಕೆ 600 ಕ್ಕೂ ಹೆಚ್ಚುವರಿ ಬಸ್ ಗಳ ವ್ಯವಸ್ಥೆ

ಶನಿವಾರ, 26 ಮಾರ್ಚ್ 2022 (20:44 IST)
ಯುಗಾದಿ (Ugadi) ಹಬ್ಬದ (Festival) ಹಿನ್ನೆಲೆ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಸಾರಿಗೆ ಇಲಾಖೆ ವಿಶೇಷ ಬಸ್​ಗಳ (Special buses) ವ್ಯವಸ್ಥೆ ಮಾಡಿದೆ. KSRTC ಮಹತ್ವದ ಕ್ರಮ ಕೈಗೊಂಡಿದ್ದು, ಸುಮಾರು 600 ಹೆಚ್ಚುವರಿ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ.
 
ಈ ಮೂಲಕ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಬುಕ್ಕಿಂಗ್​ (Ticket Booking) ಸೌಲಭ್ಯ ಕಲ್ಪಿಸಲಾಗಿದೆ.
 
ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್
 
ದಿನಾಂಕ: 02.04.2022ರಂದು ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 01.04.2022 ಹಾಗೂ 02.04.2022 ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 600 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 03.04.2022ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
 
ಯುಗಾದಿ ಪ್ರಯುಕ್ತ ಹೆಚ್ಚುವರಿ ಬಸ್​ಗಳ ಸಂಚಾರ
 
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ