ಮೋಸ್ಟ್ ವಾಂಟೆಡ್‌ ನಕ್ಸಲ್ ಸುರೇಶ್ ಸೆರೆ

geetha

ಶನಿವಾರ, 17 ಫೆಬ್ರವರಿ 2024 (21:00 IST)
ಚಿಕ್ಕಮಗಳೂರು:ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್  ಮೇಲೆ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ನಕ್ಸಲ್ ಸುರೇಶ್ ಗಾಯಗೊಂಡಿದ್ದ. ಹೀಗಾಗಿ ಸುರೇಶ್ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ. ಈ ವಿಚಾರ ತಿಳಿದ ಕೇರಳ ಪೊಲೀಸರು ಆಸ್ಪತ್ರೆ ಮೇಲೆ ದಾಳಿ ನಡೆಸಿ ಸುರೇಶ್ನನ್ನು ಬಂಧಿಸಿದ್ದಾರೆ.ಕರ್ನಾಟಕದ ಮೋಸ್ಟ್ ವಾಂಟೆಡ್‌ ಭೂಗತ ನಕ್ಸಲ್ ಸುರೇಶ್ನನ್ನು ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಂಧಿಸಲಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ  ತಾಲೂಕಿನ ಅಂಗಡಿ ಗ್ರಾಮದ ಸುರೇಶ್ನನ್ನು  ಪೊಲೀಸರು ಬಂಧಿಸಿದ್ದಾರೆ. 

ಸುರೇಶ್‌ ಕಳೆದ 10 ವರ್ಷಗಳಿಂದ ಭೂಗತ ನಕ್ಸಲ್ ಆಗಿದ್ದ. ಪೊಲೀಸ್ ಇಲಾಖೆ, ಸುರೇಶ್ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಕೇರಳ ಕರ್ನಾಟಕ ಗಡಿ ಪ್ರದೇಶದ ಅರಣ್ಯದಲ್ಲಿ ಸುರೇಶ್ ಅಡಗಿದ್ದ. ಸುರೇಶ್ ವಿರುದ್ಧ ಚಿಕ್ಕಮಗಳೂರು , ಉಡುಪಿ , ಶಿವಮೊಗ್ಗ ಜಿಲ್ಲೆಯಲ್ಲಿ ಕೇಸ್ ದಾಖಲಾಗಿವೆ. 10ಕ್ಕೂ ಅಧಿಕ ಪ್ರಕರಣಗಳಲ್ಲಿ ಸುರೇಶ್ ಪೊಲೀಸರಿಗೆ ಬೇಕಾಗಿರುವ ಆರೋಪಿ.
 
ಕರ್ನಾಟಕ ಕರಾವಳಿ, ಪಶ್ಚಿಮ ಘಟ್ಟದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಚುರುಕಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ತೀವ್ರ ನಿಗಾ ವಹಿಲಾಗುತ್ತಿದೆ. ನಕ್ಸಲರ ಓಡಾಟದ ಹಿನ್ನಲೆ ಎ.ಎನ್.ಎಫ್. ನಿಂದ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಮಲೆನಾಡು-ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ನಕ್ಸಲ್ ನಿಗ್ರಹ ದಳಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಪೊಲೀಸ ಮೂಲಗಳು ತಿಳಿಸಿವೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ