ಶಾಸಕಿ ಮೋಟಮ್ಮ ಭೂ ಅಕ್ರಮದಲ್ಲಿ ಭಾಗಿ ಆರೋಪ

ಬುಧವಾರ, 8 ಮಾರ್ಚ್ 2017 (14:46 IST)
ಎಂಎಲ್‌ಸಿ ಮೋಟಮ್ಮ ಭೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಆರೋಪಿಸಿದ್ದಾರೆ.
 
ತಹಸೀಲ್ದಾರ್ ನಾಗೇಶ್ ಸೇರಿದಂತೆ ನಿಷ್ಠಾವಂತ ಅಧಿಕಾರಿಗಳಿಗೆ ಕಾನೂನುಬಾಹಿರವಾಗಿ ಕೆಲಸ ಮಾಡುವಂತೆ ಶಾಸಕಿ ಮೋಟಮ್ಮ ಒತ್ತಡ ಹೇರುತ್ತಿರುವ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
 
ಕಂದೂರಿನಲ್ಲಿ ಸರ್ವೇ ಸಂಖ್ಯೆ 156 ರಲ್ಲಿ 15 ಎಕರೆ ಭೂಮಿಯನ್ನು ಶಾಸಕಿ ಮೋಟಮ್ಮ ಒತ್ತುವರಿ ಮಾಡಿಕೊಂಡಿದ್ದಾರೆ, ಒತ್ತುವರಿ ಜಮೀನು ತೆರುವುಗೊಳಿಸುವಂತೆ ನೋಟಿಸ್ ನೀಡಿದ ತಹಸೀಲ್ದಾರ್‌ ನಾಗೇಶ್‌ ಅವರಿಗೆ ವರ್ಗಾವಣೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಕಂದಾಯ ಇಲಾಖೆಯಿಂದ ನಾಗೇಶ್‌ಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಮಧ್ಯಪ್ರವೇಶದಿಂದ ಮತ್ತೆ ಕಂದಾಯ ಇಲಾಖೆಯಲ್ಲಿ ಮುಂದುವರಿಯುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಶಾಸಕಿ ಮೋಟಮ್ಮ ಅವರ ಭೂ ಅಕ್ರಮದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವರಿಗೆ ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಮಾಹಿತಿ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ