ಮಗನ ಆಸ್ತಿಯಲ್ಲಿ ತಾಯಿಗೂ ಹಕ್ಕು-ಹೈಕೋರ್ಟ್
ಹಿಂದೂ ಉತ್ತರಾಧಿಕಾರಿ ಕಾಯ್ದೆಯಡಿ ಮೃತ ಪುತ್ರನ ಆಸ್ತಿಗೆ ತಾಯಿಯು ಮೊದಲನೇ ವರ್ಗದ ವಾರಸುದಾರಳಾಗಿದ್ದು, ಪತಿ ಬದುಕಿದ್ದರೂ ಪಿತ್ರಾರ್ಜಿತ ಆಸ್ತಿಯಲ್ಲಿ ಪುತ್ರನಿಗೆ ಸೇರಬೇಕಿರುವ ಆಸ್ತಿಯಲ್ಲಿ ತಾಯಿ ತನ್ನ ಪಾಲು ಪಡೆಯಬಹುದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಟಿ. ಎನ್. ಸುಶೀಲಮ್ಮ ಎಂಬುವವರು ಸಲ್ಲಿಸಿದ್ದ ಸಾಮಾನ್ಯ ಎರಡನೇ ಮೇಲ್ಮನವಿಯನ್ನು ನ್ಯಾ. ಎಚ್.ಪಿ. ಸಂದೇಶ್ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿ ಈ ಆದೇಶವನ್ನ ಹೊರಡಿಸಿದೆ.