ರಾಯಚೂರು : ಬೆಂಕಿ ಅವಘಡದಿಂದಾಗಿ ಮನೆಯಲ್ಲಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ನಡೆದಿದೆ.
ಶಕ್ತಿನಗರದ ಕೆಪಿಸಿ ಕ್ವಾಟ್ರಸ್ನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮಂಡ್ಯ ಮೂಲದ ರಂಜಿತಾ(33), ಮಕ್ಕಳಾದ ಮೃದಲ(13), ತಾರುಣ್ಯ(5) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಅಳವಡಿಸಿದ್ದ ಎಸಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಘಟನೆಗೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.
ಮೃತ ರಂಜಿತಾ ಪತಿ ಸಿದ್ದಲಿಂಗಯ್ಯ ಸ್ವಾಮಿ ಆರ್ಟಿಪಿಎಸ್ನಲ್ಲಿ ಎಇಇ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಅವಘಡ ನಡೆದಿದೆ. ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.