ಗೀಸರ್ನಿಂದ ತಾಯಿ, ಮಗು ಉಸಿರುಗಟ್ಟಿ ಸಾವು!
ಮೃತ ದುರ್ದೈವಿಗಳನ್ನು ಮಂಗಳಾ(35) ಹಾಗೂ ಮಗಳು ಗೌತಮಿ(7) ಎಂದು ಗುರುತಿಸಲಾಗಿದೆ. ಮಂಜುಳಾ ಪತಿ ಕೆಲಸಕ್ಕೆ ತೆರಳಿದ ಬಳಿಕ ಈ ಅವಘಢ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳಾ ಅವರು ಗ್ಯಾಸ್ ಗೀಸರ್ ಆನ್ ಮಾಡಿ ಮಗಳು ಗೌತಮಿಗೆ ಸ್ನಾನ ಮಾಡಿಸಲೆಂದು ಹೋಗಿದ್ದರು. ಈ ವೇಳೆ ಗೀಸರ್ ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ಇಡೀ ಕೊಠಡಿ ಆವರಿಸಿದೆ. ಪರಿಣಾಮ ಉಸಿರಾಡಲು ಸಾಧ್ಯವಾಗದೆ ಅಮ್ಮ-ಮಗಳು ಸ್ಥಳದಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.