ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಕೊಂದ ತಾಯಿ
ಮಾನಸಿಕವಾಗಿ ನೊಂದಿದ್ದ ತಾಯಿ ತನ್ನ ನಾಲ್ಕು ಮತ್ತು 2 ವರ್ಷದ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟಿದ್ದಾಳೆ. ಬಳಿಕ ತಾನೂ ಅದೇ ಬೆಂಕಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲೆತ್ನಿಸಿದ್ದಾಳೆ.
ಈ ವೇಳೆ ಸ್ಥಳೀಯರು ಗದ್ದಲ ಕೇಳಿ ಮೂವರನ್ನೂ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ತೀವ್ರ ಸುಟ್ಟ ಗಾಯಗಳಾದ ಕಾರಣ ಮೂವರೂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.