ಮಾತೆ ಮಹಾದೇವಿ ಭಾವಚಿತ್ರಕ್ಕೆ ಪ್ರತಿಭಟನಾಕಾರರಿಂದ ಚಪ್ಪಲಿ ಏಟು

ಭಾನುವಾರ, 30 ಜುಲೈ 2017 (13:46 IST)
ವೀರಶೈವ ಲಿಂಗಾಯತ ಸಮಾಜದವರು ಮಾತೆ ಮಹಾದೇವಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವೀರಶೈವ ಸಮಾಜದವರು, ರಂಭಾಪುರಿ ಶ್ರೀಗಳ ವಿರುದ್ಧ ಅವಹೇಳನಾಕಾರಿ ಮಾತನಾಡಿ ಮಾತೆ ಮಹಾದೇವಿ ಅಕ್ಷಮ್ಯ ಅಪರಾಧ ಎಸಗಿದ್ದಾರೆ ಎಂದು ಗುಡುಗಿದ್ದಾರೆ.
 
ಮಾತೆ ಮಹಾದೇವಿ ಹಾಗೂ ಅವರ ಬೆಂಬಲಿಗರ ವಿರುದ್ಧ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಪ್ರತ್ಯೇಕ ಲಿಂಗಾಯುತ ಧರ್ಮ ಕುರಿತಂತೆ ಮಾತೆ ಮಹಾದೇವಿ, ರಂಭಾಪುರಿ ಶ್ರೀಗಳ ವಿರುದ್ಧ ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ