ಗರ್ಭಿಣಿ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಾಯಿ..!
ಮಗಳು ಮದುವೆಯಾಗದೇ ಗರ್ಭಿಣಿಯಾಗಿದ್ದಾಳೆ ಎನ್ನುವ ವಿಚಾರ ತಿಳಿದು ಕೋಪಗೊಂಡ ತಾಯಿ ಆಕೆಯನ್ನು ಕಾಡಿಗೆ ಕರೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ತಮ್ಮ 21 ವರ್ಷದ ಅವಿವಾಹಿತ ಮಗಳು ಗರ್ಭಿಣಿಯಾಗಿರುವ ವಿಷಯ ತಿಳಿದ ಮಹಿಳೆಯ ಮನೆಯವರು ಆಕ್ರೋಶಗೊಂಡಿದ್ದಾರೆ. ನಂತರ ಮಹಿಳೆಯ ತಾಯಿ ಮತ್ತು ಸಹೋದರ ಆಕೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ್ದಾರೆ.ಅರಣ್ಯದಲ್ಲಿದ್ದ ಕೆಲವು ರೈತರು ಮಹಿಳೆಯನ್ನು ಗಮನಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಇನ್ನು ಅಲ್ಲಿನ ವೈದ್ಯರು ಆಕೆಯನ್ನು ಮೀರತ್‌ನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆಕೆಯ ತಾಯಿ ಮತ್ತು ಸಹೋದರನನ್ನು ಇದೀಗ ಬಂಧಿಸಲಾಗಿದ್ದು ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.