1-10ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ಭಾಗ್ಯ

ಶನಿವಾರ, 12 ಆಗಸ್ಟ್ 2023 (14:02 IST)
1 ರಿಂದ 10ನೇ ತರಗತಿ ಮಕ್ಕಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ವಿತರಣೆ ಮಾಡುವಂತೆ ಆದೇಶ ಹೊರಡಿಸಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯ ಭಾಗ್ಯ ಲಭಿಸಲಿದೆ. ಈ ಹಿಂದೆ ವಾರದಲ್ಲಿ 2 ದಿನ 1 ರಿಂದ 8 ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಮೊಟ್ಟೆ, ಚಿಕ್ಕಿಯನ್ನ ನೀಡಲಾಗುತ್ತಿತ್ತು. ಈ ಬಾರಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೂ ವಿಸ್ತರಿಸುವಂತೆ ಸರ್ಕಾರ ಭರವಸೆ ನೀಡಿತ್ತು. 280 ಕೋಟಿ ವೆಚ್ಚದ ಈ ಯೋಜನೆಗೆ 60 ಲಕ್ಷ ವಿದ್ಯಾರ್ಥಿಗಳು ಅರ್ಹರಿರಲಿದ್ದಾರೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣಿನ ಖರೀದಿಯ ಜವಾಬ್ದಾರಿ ನಿರ್ವಹಿಸಲು ಸೂಚನೆ ನೀಡೆಲಾಗಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಉತ್ತಮ ಗುಣಮಟ್ಟದಿಂದ ಕೂಡಿರುವ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣನ್ನ ಪರಿಶೀಲಿಸಿ ಖರೀದಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ