ಬಾಯಿಗೆ ಬಟ್ಟೆ ತುರುಕಿ ಖಾಲಿ ಮನೆಗೆ ಎಳೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ
ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಾಯಿಗೆ ಬಟ್ಟೆ ತುರುಕಿ ಹಾಳು ಮನೆಯೊಂದಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಲೈಂಗಿಕ ಕ್ರಿಯೆಗೆ ಸಹಕರಿಸದ ಬಾಲಕಿಯ ಬಾಯಿಗೆ ಬಟ್ಟೆ ಕಟ್ಟಿ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು.
ಈ ಕುರಿತು ಚಿಂಚೋಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಆರೋಪಿಯ ಅಪರಾಧ ಸಾಬೀತಾಗಿದ್ದರಿಂದಾಗಿ ಆತನಿಗೆ ಐಪಿಸಿ 366 ಎ ಅಡಿ 10 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ಮತ್ತು ಪೋಕ್ಸೋ ಕಾಯ್ದೆಯಡಿ ಜೀವಾವಧಿ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.