ಅನಂತ್ ಕುಮಾರ್ ಹೆಗಡೆ ದುಡುಕಿ ತಪ್ಪು ಮಾಡಿದ್ದಾರೆ: ಯಡಿಯೂರಪ್ಪ ಸಮರ್ಥನೆ

ಸೋಮವಾರ, 16 ಜನವರಿ 2017 (11:44 IST)
ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ದುಡುಕಿ ತಪ್ಪು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮರ್ಥನೆ ನೀಡಿದ್ದಾರೆ.
 
ಉಳವಿ ಕ್ಷೇತ್ರದಲ್ಲಿ ನಡೆದ ಶ್ರೀ ಗುರು ಸಿದ್ದರಾಮೇಶ್ವರರ 844 ನೇ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಅನಂತ್ ಕುಮಾರ್ ಹೆಗಡೆಗೆ ತಮ್ಮ ತಪ್ಪಿನ ಅರಿವಾಗಿದೆ. ಈ ಬಗ್ಗೆ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದ್ದು, ಮುಂದೆ ಇಂತಹ ತಪ್ಪುಗಳು ನಡೆಯದಂತೆ ಎಚ್ಚರ ವಹಿಸಲಾಗುವುದು ಎಂದು ಭರವಸೆ ನೀಡಿದರು.
 
ಸಂಸದ ಅನಂತ್ ಕುಮಾರ್ ಹೆಗಡೆ ವಿಜಾರಣೆಗೆ ಹಾಜರಾಗಲಿದ್ದಾರೆ ಎಂದ ಅವರು, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. 
 
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇತರ ರೋಗಿಗಳಿಗೆ ವೈದ್ಯರು ಪರಿಶೀಲಿಸುತ್ತಿದ್ದರು. ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. 
 
ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದವು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ