ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಸಂಸದರು ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇತರ ರೋಗಿಗಳನ್ನು ವೈದ್ಯರು ಪರಿಶೀಲಿಸುತ್ತಿದ್ದರು. ಹೀಗಾಗಿ ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು.