ಫೆಬ್ರವರಿ 25ರಂದು ಮೃತಪಟ್ಟ ಹುತಾತ್ಮ ಯೋಧ ಅಲ್ತಾಫ್ ಮನೆಗೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಇಬ್ರಾಹಿಂ , ಸಂಸದ ಪ್ರತಾಪ್ ಸಿಂಹ ಅವರು ಸಂಸದರಾಗಿರುವ ಬಗ್ಗೆಯೇ ಸಂಶಯವಿದ್ದು ಪತ್ರಿಕೆಯಿಂದ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದ ಪರಿಣಾಮ ಈ ರೀತಿಯಾಗಿದೆ ದಯೆ ಧರ್ಮ ಮಾನವಿತೆಯ ಬಗ್ಗೆ ಅವರು ಮೊದಲು ತಿಳಿಯಲಿ ಎಂದರು.
ಶಿವಮೊಗ್ಗದಲ್ಲಿ ಗಲಭೆ ಸಂದರ್ಭ ಆಸ್ತಿ-ಪಾಸ್ತಿ ಹಾನಿ ಮಾಡಲು ಪ್ರೇರಣೆ ನೀಡಿದ ನಾಯಕರ ಆಸ್ತಿಗಳನ್ನು ಸರ್ಕಾರ ಕೂಡಲೇ ಜಪ್ತಿ ಮಾಡಲಿ ಎಂದು ಒತ್ತಾಯಿಸಿದ ಇಬ್ರಾಹಿಂ ಹಿಜಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪಿಗೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಹೇಳಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಕೆಎಂಬಿ ಗಣೇಶ್ ಮುಖಂಡ ನಾಪಂಡ ಮುತ್ತಪ್ಪ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರೀಂ, ಮಡಿಕೇರಿಯ ಸುನಿಲ್, ಯೂಸುಫ್ ಕೊಂಡಂಗೇರಿ, ಮಡಿಕೇರಿ ನಗರಸಭೆ ಮುಸ್ತಪ್ಪ, ಸುಂಟಿಕೊಪ್ಪ ಜಮಾಹತ್ ಅಧ್ಯಕ್ಷ ಅಬ್ದುಲ್ಲಾ ಇದ್ದರು.