ಪಜೀರ್‌ನ ಕಾರ್ತಿಕ್‌ರಾಜ್ ಕೊಲೆ ಪ್ರಕರಣದ ಆರೋಪಿಗಳ ಪತ್ತೆಗೆ ಆಗ್ರಹಿಸಿ ಕೊಣಾಜೆ ಪೊಲೀಸ್ ಠಾಣೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ತಿಕ್‌ರಾಜ್ ಸೇರಿದಂತೆ ಹಲವು ದುಷ್ಕೃತ್ಯಗಳು ನಡೆಯುತ್ತಿವೆ. ಆದರೆ, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಪರಾಧಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ. ಈ ಎಲ್ಲ ದೃಷ್ಕೃತ್ಯಗಳಿಗೆ ಈ ಭಾಗದ ಶಾಸಕರೇ ನೇರ ಹೊಣೆ ಎಂದು ದೂರಿದರು.
ಪ್ರತಿಭಟನಾ ಧರಣಿಗೂ ಮುನ್ನ ಪಜೀರ್‌ನಿಂದ ಕೊಣಾಜೆಯ ಪೊಲೀಸ್ ಠಾಣೆಯವರೆಗೂ ಮೌನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜಯರಾಮ್ ಶೆಟ್ಟಿ, ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಮೊದಲಾದವರು ಪಾಲ್ಗೊಂಡಿದ್ದರು.