ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಎಂಪಿ ರೇಣುಕಾಚಾರ್ಯ ನೇಮಕ

ಶನಿವಾರ, 7 ಸೆಪ್ಟಂಬರ್ 2019 (10:56 IST)
ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರನ್ನ ನೇಮಕ ಮಾಡಲಾಗಿದೆ.
ಶಾಸಕ ರೇಣುಕಾಚಾರ್ಯ ಅವರು, ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿದದ್ದಕ್ಕೆ ಆಕ್ರೋಶಗೊಂಡಿದ್ದು, ಪಕ್ಷದ ವಿರುದ್ಧ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದರು. ಅವರ ಮನವೊಲಿಸಲು ಸಿಎಂ ಬಿಎಸ್ ಯಡಿಯೂರಪ್ಪ  ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ನೀಡಿದ್ದಾರೆ ಎನ್ನಲಾಗಿದೆ.


ಇದೀಗ  ಶಾಸಕ ಎಂಪಿ ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದಕ್ಕೆ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ