ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿ.ಎಸ್.ಯಡಿಯೂರಪ್ಪ ಅವರ ಕಾಲೆಳೆದರೇ ರಾಜ್ಯ ಬಿಜೆಪಿ ಘಟಕದಲ್ಲಿ ಸಮಸ್ಯೆಯಾಗುತ್ತದೆ. ಮುಂಬರುವ ವಿಧಾನಸಭೆ ಚುಣಾವಣೆ ಎದುರಿಸಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಸ್ಥಾಪಿಸಬೇಕಾದರೆ ನಾವೆಲ್ಲರೂ ಸೇರಿ ಬಿಎಸ್‌ವೈ ಅವರಿಗೆ ಬೆಂಬಲ ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆದರೆ ಈಶ್ವರಪ್ಪ ಅವರಿಗೂ ಲಾಭವಾಗುತ್ತದೆ. ಆದರೆ, ಸಣ್ಣಪುಟ್ಟ ವೈಮನಸ್ಸಿನಿಂದ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪರಲ್ಲಿ ಸಂಸದ ಶ್ರೀರಾಮಲು ಅವರು ಮನವಿ ಮಾಡಿಕೊಂಡಿದ್ದಾರೆ.