ಶಿವರಾಜ ತಂಗಡಗಿ ಪರ ಧ್ವನಿಯೆತ್ತಿದ ಭೋವಿ ಶ್ರೀ
ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಲು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಲು ಆಗ್ರಹಿಸಿದ್ದು,ಒಳಮೀಸಲಾತಿ ವಿರೋಧಿಸಿದ ಭೋವಿ ಬಂಜಾರ ಕೊರಮ ಕೊರಚ ಸಮುದಾಯಗಳು ಕಾಂಗ್ರೇಸ್ ಗೆ ಮತನೀಡಿದ್ದಾವೆ.ಈ ಸಮುದಾಯಗಳ ಸಾಂಘಿಕ ಶಕ್ತಿಯನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಸ್ಥಾನ ನೀಡಲು ಸ್ವಾಮೀಜಿಗಳು ಆಗ್ರಹಿಸಿದ್ದಾರೆ