ಶ್ರೀಗಳು 4 ದಿನ ಪೊಲೀಸ್ ಕಸ್ಟಡಿಗೆ!
ಆರೋಪಿಯನ್ನು ಐದು ದಿನಗಳ ಕಾಲ ತನಿಖೆ ನಡೆಸುವ ಸಲುವಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸಿದ್ದರು. ಆದರೆ ಕೋರ್ಟ್ ವಿಚಾರಣೆ ನಡೆಸಿ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಇಂದಿನಿಂದ ಸೆಪ್ಟೆಂಬರ್ 6ರ ವರೆಗೆ ಶ್ರೀಗಳು ಪೊಲೀಸ್ ಕಸ್ಟಡಿಯಲ್ಲಿರಲಿದ್ದಾರೆ. ಜೊತೆಗೆ ಅಗತ್ಯವಿದ್ದರೆ ಪೊಲೀಸ್ ಕಸ್ಟಡಿಯಲ್ಲೇ ವೈದ್ಯಕೀಯ ನೆರವು ನೀಡುವಂತೆ ಚಿತ್ರದುರ್ಗದ ಜೆಎಂಎಫ್ ಕೋರ್ಟ್ ಆದೇಶಿಸಿದೆ.