ಸಿಎಂ ಕುಮಾರಸ್ವಾಮಿಗೆ ನೋಬೆಲ್ ಪ್ರಶಸ್ತಿ ಕೊಡಬೇಕೆಂದು ಶಾಸಕ ಈಶ್ಚರಪ್ಪ ಹೇಳಿದ್ಯಾಕೆ?
ಶನಿವಾರ, 22 ಡಿಸೆಂಬರ್ 2018 (06:32 IST)
ದಾವಣಗೆರೆ : ರಾಜ್ಯದ ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ ಎಂದು ಶಾಸಕ ಕೆ ಎಸ್ ಈಶ್ವರಪ್ಪ ಅವರು ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ' ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ರಾಜ್ಯದ ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಸದನದಲ್ಲಿ ಉತ್ತರ ಕರ್ನಾಟಕ ಬಗ್ಗೆ ಚರ್ಚಿಸಲು ಅವಕಾಶ ನೀಡಿಲ್ಲ. ಅಲ್ಲದೇ ಕಬ್ಬು ಬೆಳೆಗಾರರ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವು ಇಲ್ಲ. ಆದ್ದರಿಂದ ಇದು ವ್ಯರ್ಥವಾದ ಅಧಿವೇಶನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಕೇವಲ ಘೋಷಣೆಗಳನ್ನು ಮಾತ್ರ ಮಾಡುತ್ತಿದೆ. ಹಾಗಾಗಿ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಸಿಎಂ ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ನೋಬೆಲ್ ಪ್ರಶಸ್ತಿ ಕೊಡಬೇಕೆಂದು ಶಾಸಕ ಕೆ ಎಸ್ ಈಶ್ಚರಪ್ಪ ವ್ಯಂಗ್ಯವಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.