ಸಿದ್ದರಾಮಯ್ಯನವರ ಪುತ್ರ ರಾಕೇಶ್ ಸಾವಿನ ಕಾರಣ ಬಿಚ್ಚಿಟ್ಟ ಎಂಟಿಬಿ ನಾಗರಾಜ್

ಭಾನುವಾರ, 22 ಸೆಪ್ಟಂಬರ್ 2019 (15:01 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಸಾವನ್ನಪ್ಪಲು ಭೈರತಿ ಸುರೇಶ್ ಕಾರಣ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಅವನು ಬಚ್ಚಾ, ಆತನ ಬಂಡವಾಳ ನನಗೆ ಗೊತ್ತು. ರಾಕೇಶ್ ಸಿದ್ದರಾಮಯ್ಯನನ್ನು ಹಾಳು ಮಾಡಿದ್ದೇ ಭೈರತಿ ಸುರೇಶ್. ಇನ್ನೂ ನೂರು ವರ್ಷ ಬದುಕಿ ಬಾಳಬೇಕಿದ್ದವನನ್ನು ಸಾಯಿಸಿದ್ದು ನನಗೆ ಗೊತ್ತಿದೆ ಎಂದು ಕಿಡಿಕಾರಿದ್ದಾರೆ.


ಅಲ್ಲದೇ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಹೊರಿಸಿರುವ ಆರೋಪ ಶುದ್ಧ ಸುಳ್ಳು. ಸಿದ್ದರಾಮಯ್ಯ ಕಾಂಗ್ರೆಸ್‍ಗೆ ಬರುವ ಮುನ್ನವೇ ನಾನು ಶಾಸಕನಾಗಿದ್ದೆ. ಎಸ್.ಎಂ.ಕೃಷ್ಣ ನನಗೆ ಟಿಕೆಟ್ ನೀಡಿದ್ದು, ಸಿದ್ದರಾಮಯ್ಯ ಅಲ್ಲ. ನನ್ನ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ. ಕಾಂಗ್ರೆಸ್ ಪಕ್ಷದ ಯಾವೊಬ್ಬ ನಾಯಕನಿಗೂ ನನ್ನ ಬಗ್ಗೆ ಮಾತನಾಡುವ ಹಕ್ಕಿಲ್ಲ. ಎಲ್ಲರ ಬಂಡವಾಳ ನನಗೆ ಗೊತ್ತಿದೆ ಎಂದು ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ