10ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುಡಾ ಆಯುಕ್ತ

Sampriya

ಶುಕ್ರವಾರ, 22 ನವೆಂಬರ್ 2024 (20:05 IST)
ಬೀದರ್: 10 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ  ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದ ಆಯುಕ್ತ ಸೇರಿದಂತೆ ಮೂವರು ಶುಕ್ರವಾರ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ. ಲೋಕಾಯುಕ್ತ ಪೊಲೀಸರ ದಾಳಿ ವೇಳೆ ಬಲೆಗೆ ಬಿದ್ದಿದ್ದಾರೆ.

ಈ ಸಂಬಂಧ ಕೃಷಿಯೇತರ ಜಮೀನಿನ(ಎನ್‌.ಎ) ನಿವೇಶನಗಳ ಮಾರಾಟದ ಅನುಮತಿಗಾಗಿ 10 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಶ್ರೀಕಾಂತ್ ಚಿಮಕೋಡೆ, ಬುಡಾ ಸದಸ್ಯ ಚಂದ್ರಕಾಂತ್ ರೆಡ್ಡಿ ಹಾಗೂ ಅವರ ಆಪ್ತ ಸಿದ್ದು ಹೂಗಾರ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆದು ತನಿಖೆ ನಡೆಸುತ್ತಿದ್ದಾರೆ.

ಬೀದರ್ ನಗರದ ಚಿಕ್ಕಪೇಟೆಯಲ್ಲಿರುವ ಸರ್ವೇ ನಂಬರ್ 26ರಲ್ಲಿ ಕೃಷಿಯೇತರ ಜಮೀನಿನ ಶೇ. 60 ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಲು ಮತ್ತು ಮಾರಾಟಕ್ಕೆ ಅನುಮತಿ ನೀಡಲು ಬುಡಾ ಆಯುಕ್ತ ಶ್ರೀಕಾಂತ್ ಹಾಗೂ ಚಂದ್ರಕಾಂತ್ ಅವರು 50 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಇಂದು 10 ಲಕ್ಷ ರೂಪಾಯಿ ಇವರಿಗೆ ಮುಂಗಡ ಪಡೆಯುತ್ತಿದ್ದ ವೇಳೇ ಲೋಕಾಯುಕ್ತ ಪೊಲೀಸರು ರೆಡ್‌ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್ ನೌಬಾದೆ ಅವರ ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ