ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್‌ಗೆ ದೊಡ್ಡ ಗೆಲುವು

Sampriya

ಶುಕ್ರವಾರ, 7 ಮಾರ್ಚ್ 2025 (17:20 IST)
ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇಡಿ)ಸಮನ್ಸ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇಬ್ಬರಿಗೂ ಬಿಗ್ ರಿಲೀಫ್ ನೀಡಿದೆ.

ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದಲ್ಲಿ ದೊಡ್ಡ ಗೆಲುವು ಸಿಕ್ಕಿದೆ.

ವಾದ ಪ್ರತಿವಾದ ಆಲಿಸಿದ ಹೈಕೋರ್ಟ್‌ನ ಎಂ ನಾಗಪ್ರಸನ್ನ ಪೀಠ, ಭೈರತಿ ಸುರೇಶ್ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಇಡಿ ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಿ ಆದೇಶ
ಹೊರಡಿಸಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯನವರು ಇಡಿ ತನಿಖೆಯಿಂದಲೂ ಪಾರಾಗಿದ್ದಾರೆ. ಮಾತ್ರವಲ್ಲ ಮುಡಾ ಪ್ರಕರಣದಲ್ಲಿ ಅವರಿಗೆ ಬಹಳ ದೊಡ್ಡ ಜಯ ಸಿಕ್ಕಂತಾಗಿದೆ.

ಈಚೆಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಜಾಗೊಳಿಸುವ ಮೂಲಕ ಹೈಕೋರ್ಟ್ ಪೀಠ ಸಿಎಂ ಸಿದ್ದರಾಮಯ್ಯಗೆ ದೊಡ್ಡ ರಿಲೀಫ್ ನೀಡಿತ್ತು.

ಇದೀಗ ಸಿಎಂ ಪತ್ನಿ ಹಾಗೂ ಸಿದ್ದರಾಮಯ್ಯ ಆಪ್ತ ಸಚಿವ ಬೈರತಿ ಸುರೇಶ್‌ಗೆ ಕೂಡ ಬಿಗ್ ರಿಲೀಫ್ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ