ಮುಡಾ ಹಗರಣ: ಸದ್ಯಕ್ಕಿಲ್ಲ ಸಿಎಂ ಸಿದ್ದರಾಮಯ್ಯಗೆ ಸಿಬಿಐ ಸಂಕಷ್ಟ, ಯಾಕೆ ಗೊತ್ತಾ

Sampriya

ಮಂಗಳವಾರ, 5 ನವೆಂಬರ್ 2024 (15:51 IST)
ಬೆಂಗಳೂರು: ಮುಡಾ ಸೈಟ್‌ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದೆ.  ಇದರಿಂದ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಸಿಬಿಐ ಸಂಕಷ್ಟ ದೂರಾವಾಗಿದೆ.

ಅಲ್ಲದೇ, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಇತರರಿಗೆ ಕೋರ್ಟ್‌ ನೋಟಿಸ್‌ ನೀಡಿದೆ.

ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.


ನ.25 ರವರೆಗೆ ನಡೆಸುವ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಮಂಗಳವಾರ ವಿಚಾರಣೆ ನಡೆಸಲಾಯಿತು.  ಸದ್ಯ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಅವರು ರಾಜ್ಯ ಸರ್ಕಾರ ಅಧೀನದಲ್ಲಿರುವುದರಿಂದ ನಿಷ್ಪಕ್ಷಪಾತ ತನಿಖೆ ಆಗುವುದಿಲ್ಲ. ಹಾಗಾಗಿ, ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ