ಅಳೆದು ತೂಗಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು: ಎಫ್ಐಆರ್ ವಿವರ ಇಲ್ಲಿದೆ

Sampriya

ಶುಕ್ರವಾರ, 27 ಸೆಪ್ಟಂಬರ್ 2024 (16:06 IST)
ಮೈಸೂರು:  ಮುಡಾ ಹಗರಣದಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಕರಣದ ಎ1 ಆರೋಪಿಯಾಗಿದ್ದು, ಅವರ ಪತ್ನಿ ಪಾರ್ವತಿ ಅವರು ಎ2 ಆರೋಪಿಯಾಗಿದ್ದಾರೆ.

ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿ ಹೈಕೋರ್ಟ್ ತೀರ್ಪಿನ ಬಳಿಕ ಇದೀಗ ಸಿದ್ದರಾಮಯ್ಯ ಹಾಗೂ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.  ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನಸ್ವಾಮಿ ಎ3, ಭೂ ಮಾಲೀಕ ದೇವರಾಜು ಎ4 ಹಾಗೂ ಇತರರ ಮೇಲೆ ದಾಖಲಾಗಿದೆ.  ಕೋರ್ಟ್ ಆದೇಶದಂತೆ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ದೂರುದಾರರು ನ್ಯಾಯಾಲಯಕ್ಕೆ ನೀಡಿದ ಮಾಹಿತಿಯಂತೆ, ಯಾವುದನ್ನು ಕಡೆಗಣಿಸಿದೆ ಎಲ್ಲ ಅಂಶಗಳನ್ನು ಸೇರಿಸಿಕೊಂಡು ಇದೀಗ ಎಫ್‌ಐಆರ್ ದಾಖಲಾಗಿದೆ. ತನಿಖೆ ವೇಳೆ ಪ್ರಕರಣದಲ್ಲಿ ಆರೋಪಿಗಳ ಪಾತ್ರದ ಮೇಲೆ ಅವರ ಸ್ಥಾನ ಬದಲಾಗುವ ಸಾಧ್ಯತೆಯಿದೆ.

ಸಿದ್ದರಾಮಯ್ಯ ಅವರ 40 ವರ್ಷದ ಸುದೀರ್ಘ ರಾಜಕೀಯ ಜೀವನದಲ್ಲಿ ಇದೀಗ ಅವರ ವಿರುದ್ಧ ಮೊದಲ ಪ್ರಕರಣ ದಾಖಲಾಗಿದೆ. ಮೊದಲ ಭಾರೀ ಗಂಭೀರ ಸೆಕ್ಷನ್‌ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ