ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ಹೈಕೋರ್ಟ್ ನೋಟಿಸ್‌

Sampriya

ಗುರುವಾರ, 10 ಜುಲೈ 2025 (18:52 IST)
Photo Credit X
ಬೆಂಗಳೂರು: ಮುಡಾದಲ್ಲಿ ನಡೆದಿರುವ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.

ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು. 

ಈ ನಡುವೆ ನೊಟೀಸ್ ಜಾರಿಯಾಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠವು ವಿಚಾರಣೆಯನ್ನು ಸೆಪ್ಟೆಂಬರ್ 4 ಕ್ಕೆ ಮುಂದೂಡಿದೆ. 

ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಯಾಗಿರದ ಹಿನ್ನೆಲೆಯಲ್ಲಿ, ಈಗ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ಮುಖ್ಯ ನ್ಯಾ. ವಿ.ಕಾಮೇಶ್ವರ ರಾವ್ ಹಾಗೂ ಸಿ.ಎಂ.ಜೋಶಿ ಅವರಿದ್ದ ಪೀಠ ಸೂಚನೆ ನೀಡಿದೆ. ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ