ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ, ಭೈರತಿ ಸುರೇಶ್‌ಗೆ ತಾತ್ಕಾಲಿಕ ರಿಲೀಫ್
ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮುಂದುವರಿದಿದೆ. ಇಬ್ಬರಿಗೂ ಜಾರಿಯಾಗಿದ್ದ ಸಮನ್ಸ್ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಪೀಠ, ಫೆಬ್ರವರಿ 10ಕ್ಕೆ ವಿಚಾರಣೆ ಮುಂದೂಡಿದೆ.
ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.