ಮುಡಾ ಹಗರಣ: ವೈಟ್ನರ್‌ ಕುರಿತ ಪ್ರಶ್ನೆಗೆ ಸಿಎಂ ಪತ್ನಿ ನೀಡಿದ ಉತ್ತರ ಹೀಗಿತ್ತು

Sampriya

ಶನಿವಾರ, 26 ಅಕ್ಟೋಬರ್ 2024 (14:17 IST)
Photo Courtesy X
ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಪತ್ನಿ ಪಾರ್ವತಿ ಅವರನ್ನು ನಿನ್ನೆ ಮೂರು ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದರು. ವಿಚಾರಣೆ ವೇಳೆ  ಪಾರ್ವತಿ ಅವರು ಪ್ರಾಧಿಕಾರಕ್ಕೆ ಸಲ್ಲಿಸಿದ ಮನವಿ ಪತ್ರಕ್ಕೆ ವೈಟ್ನರ್ ಹಾಕಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಆರೋಪಿಯಾಗಿದ್ದು, ಅವರ ಪತ್ನಿ ಎರಡನೇ ಆರೋಪಿಯಾಗಿದ್ದಾರೆ. ಪಾರ್ವತಿ ಅವರು ಶುಕ್ರವಾರ ಮೈಸೂರು ಲೋಕಾಯುಕ್ತ ಎಸ್ ಪಿ ಟಿ.ಜೆ. ಉದೇಶ ಅವರ ಕಚೇರಿಯಲ್ಲಿ ವಿಚಾರಣೆ ಎದುರಿಸಿದ್ದಾರೆ. ಸಿಎಂ ಪತ್ನಿಯ ಹೇಳಿಕೆ ವಿಡಿಯೋ ಕ್ಯಾಮರಾದಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ.

ತನಿಖೆ ವೇಳೆ ಪರಿಹಾರದ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಡಾಕ್ಕೆ ಸಲ್ಲಿಸಿದ್ದ ಮನವಿ ಪತ್ರಕ್ಕೆ ವೈಟ್ನರ್ ಹಾಕಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ. ವಾಕ್ಯದಲ್ಲಿ ತಪ್ಪಿದ್ದ ಕಾರಣಕ್ಕೆ ವೈಟ್ನರ್ ಬಳಸಿದ್ದು, ತನಗೆ ನಿಖರವಾಗಿ ನೆನಪಿಲ್ಲ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.

ಈ ಮರೆಮಾಚಲು ಮುಡಾ ಪ್ರಕರಣ ಬೆಳಕಿಗೆ ಬಂದ ನಂತರ ಮನವಿ ಪತ್ರಕ್ಕೆ ವೈಟ್ನರ್ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ