ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆಗೆ ಸಿದ್ಧತೆ
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಭರವಸೆ ಸಿಗದಿದ್ದಾಗ ಕಳೆದ ತಿಂಗಳು ಕಾಂಗ್ರೆಸ್ ತೊರೆದಿದ್ದರು.
ಮುದ್ದಹನುಮೇಗೌಡ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದ ದಟ್ಟವಾಗಿ ಹರಿದಾಡುತ್ತಿತ್ತು. ಇದಕ್ಕೆ ಇಂಬು ನೀಡುವಂತೆ ಅವರು ಬಿಜೆಪಿಯ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.