ಮುಧೋಳ ಸ್ಪೋಟ ದುರಂತ ಪ್ರಕರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಡಿಸಿಎಂ
ಸೋಮವಾರ, 17 ಡಿಸೆಂಬರ್ 2018 (14:40 IST)
ಬಾಗಲಕೋಟೆ : ಮುಧೋಳದಲ್ಲಿ ಸ್ಪೋಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಮುಧೋಳ ತಾಲೂಕಿನ ಕುಳಲಿ ಬಳಿ ಇರುವ ಸಕ್ಕರೆ ಕಾರ್ಖಾನೆಯ ಡಿಸ್ಟಿಲರಿ ಸಂಸ್ಕರಣಾ ಘಟಕದಲ್ಲಿ ಸ್ಪೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದರು. ಈ ಕಾರ್ಖಾನೆ ಮಾಲೀಕರಾದ ಬೀಳಗಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಈಗಾಗಲೇ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಹಾಗೇ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಮೃತರ ಕುಟುಂಬಕ್ಕೆ ತಲಾ2.50 ಲಕ್ಷ ವೈಯಕ್ತಿಕವಾಗಿ ಪರಿಹಾರ ಘೋಷಿಸಿದ್ದಾರೆ. ಇದೀಗ ಸದನದಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.