ಮೂಡಿಗೆರೆ ಸರ್ವೇ ಅಧಿಕಾರಿ ಸಾವು ಪ್ರಕರಣ: ಎಫ್‌ಐಆರ್‌ನಲ್ಲಿ ಅಚ್ಚರಿ ವಿಷಯ ಬಯಲು

Sampriya

ಶುಕ್ರವಾರ, 14 ಫೆಬ್ರವರಿ 2025 (16:50 IST)
Photo Courtesy X
ಚಿಕ್ಕಮಗಳೂರು: ನಿನ್ನೆ ಮೂಡಿಗೆರೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಸರ್ವೇ ಅಧಿಕಾರಿ ಶಿವಕುಮಾರ್‌ ಅವರ ಸಾವು ಪ್ರಕರಣ ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು.. ಇದೀಗ ಪ್ರಾಥಮಿಕ ತನಿಖೆಯಲ್ಲಿ ಹನಿಟ್ರ್ಯಾಪ್‌ಗೆ ಶರಣಾದ್ರಾ  ಎಂಬ ಅನುಮಾನ ಹುಟ್ಟಿದೆ.

ಸರ್ವೆಗೆ ಹೋದಾಗ ಪರಿಚಯವಾಗಿದ್ದ ಮಹಿಳೆ ಜೊತೆ ಫೋನಿನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ಶಿವಕುಮಾರ್ ಬಳಿ ಮಹಿಳೆ ಹಣಕ್ಕಾಗಿ ಪೀಡಿಸುತ್ತಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ. ಹನಿಟ್ರ್ಯಾಪ್ ವಿಚಾರ ಎಫ್ಐಆರ್‌ನಲ್ಲಿ ಕೂಡ ಪ್ರಸ್ತಾಪವಾಗಿದೆ ಎಂದು ತಿಳಿದುಬಂದದಿದೆ. ಮಹಿಳೆಗೆ ಈಗಾಗಲೇ ಒಂದೂವರೆ ಲಕ್ಷ ಹಣ ನೀಡಿದ್ದರು, ಆಕೆ ಪದೇ ಪದೇ ಹಣ ಕೇಳಿದ್ದಕ್ಕೆ ಅವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

ಈ ಮಧ್ಯೆ ಶಿವಕುಮಾರ್ ಸರ್ವೆಯರ್ ಆಗಿದ್ದರಿಂದ ಸರ್ವೇ ವಿಚಾರವಾಗಿ ಸರಿಯಾಗಿ ಸರ್ವೆ ಮಾಡಿಲ್ಲ ಎಂದು ಇಬ್ಬರು ಅವರ ವಿರುದ್ಧ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಅಮಾನತ್ತಾಗುತ್ತೇನೆ ಎಂದು ಆತಂಕಕ್ಕೀಡಾಗಿದ್ದರು. ಹಾಗಾಗಿ, ಕಳೆದ ಎಂಟತ್ತು ತಿಂಗಳಿಂದ ಮನೆಯಲ್ಲಿ ಏಕಾಂಗಿಯಾಗಿದ್ದ ಶಿವಕುಮಾರ್ ಖಿನ್ನತೆಗೆ ಓಳಗಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಮೃತ ಶಿವಕುಮಾರ್‌ಗೆ ಪತ್ನಿ ಹಾಗೂ ಮಗಳಿದ್ದು, ಮಗಳ ಓದಿಗಾಗಿ ಪತ್ನಿ ಹಾಗೂ ಮಗಳು ಬೆಂಗಳೂರಿನಲ್ಲಿ ವಾಸವಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ