ಪೌರ ಕಾರ್ಮಿಕರ ವೇತನ ದುಪ್ಪಟ್ಟು: ಈಶ್ವರ್ ಖಂಡ್ರೆ

ಶುಕ್ರವಾರ, 19 ಆಗಸ್ಟ್ 2016 (14:50 IST)
ದೇಶದಲ್ಲಿಯೇ ರಾಜ್ಯ ಪೌರ ಕಾರ್ಮಿಕರ ವೇತನ ದುಪ್ಪಟ್ಟುಗೊಳ್ಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಐತಿಹಾಸಿಕ ದಾಖಲೆ ಸೃಷ್ಟಿಸಿದೆ ಎಂದು ಪೌರಾಡಳಿತ ಖಾತೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
 
ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆದ ಪೌರ ಕಾರ್ಮಿಕರ ರಾಜ್ಯ ಮಟ್ಟದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿಗಳ ಸಮಸ್ಯೆಗಳಿಗೆ ರಾಜ್ಯ ಸರಕಾರ ಸ್ಪಂದಿಸುತ್ತಿದೆ. 2017 ರ ಸಾಲಿನೊಳಗಾಗಿ ಪೌರ ಕಾರ್ಮಿಕರನ್ನು ಖಾಯಂ ನೌಕರರನ್ನಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದರು.
 
ಪಕ್ಷದ ಪ್ರಣಾಳಿಕೆಯಂತೆ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಪೌರ ಕಾರ್ಮಿಕರು ರಾಜ್ಯದ ಪ್ರಮುಖ ಅಂಗ ಎಂದು ಹೇಳಿದ್ದಾರೆ.
 
ಪ್ರಸಕ್ತ ಸಾಲಿನ ಸೆಪ್ಟೆಂಬರ್ ತಿಂಗಳಿನಿಂದ ಪೌರ ಕಾರ್ಮಿಕರ ಖಾತೆಗೆ ಆರ್‌ಟಿಜಿಎಸ್ ಮೂಲಕ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಪೌರಾಡಳಿತ ಖಾತೆ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ