ಪುರಸಭೆ ಉಪಚುನಾವಣೆ: ಮಾಜಿ ಸಚಿವ ಗುತ್ತೇದಾರ್ ಬೆಂಬಲಿತ ಅಭ್ಯರ್ಥಿ ಗೆಲುವು
ತೀವ್ರ ಕುತೂಹಲ ಮೂಡಿಸಿದ್ದ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಪುರಸಭೆ 19ನೇ ವಾರ್ಡನ ಚುನಾವಣೆಯಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಅಫಜಲಪುರ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಪುರಸಭೆಯ 19 ನೇ ವಾರ್ಡ್ ಗೆ ನಡೆದ ಚುನಾಚವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಪರ್ಣ ಗೆಲುವು ದಾಖಲಿಸಿದ್ದಾರೆ. 126 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಮಹಾದೇವಿ ವಿರುದ್ಧ ಗೆಲುವು ಕಂಡಿದ್ದಾರೆ. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಮತ್ತು ಹಾಲಿ ಶಾಸಕ ಎಂ. ವೈ. ಪಾಟೀಲ ನಡುವೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು.
ಎಸ್.ಟಿ. ಗೆ ಮೀಸಲಾಗಿದ್ದ ವಾರ್ಡ್ನಲ್ಲಿ ಅಭ್ಯರ್ಥಿಯೊಬ್ಬರ ಪ್ರಮಾಣ ಪತ್ರ ತಿರಸ್ಕೃತಗೊಂಡಿದ್ದರಿಂದ ಕೋರ್ಟ್ ಮೊರೆ ಹೋಗಲಾಗಿತ್ತು. ಅಕ್ಟೋಬರ್ 28 ರಂದು ಮರು ಚುನಾವಣೆ ನಡೆದಿತ್ತು. ಈಗಾಗಲೇ ಪುರಸಭೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ.