ಆಟೋ ಬಾಡಿಗೆ ವಿಚಾರಕ್ಕೆ ಕೊಲೆ
ಪ್ರಯಾಣಿಕರ ಮೇಲೆ ಆಟೋ ಚಾಲಕ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿರೋ ಘಟನೆ ಬೆಂಗಳೂರಿನ ಯಶವಂತಪುರದ ಸೋಫ್ ಬಳಿ ಫ್ಯಾಕ್ಟರಿ ನಡೆದಿದೆ. ರಾತ್ರಿ ವೇಳೆ ಕೆಲಸ ಮುಗಿಸಿಕೊಂಡು ಆಟೋದಲ್ಲಿ ಹೋಗುತ್ತಿದ್ದ ಪ್ರಯಾಣಿಕರ ಬಳಿ ಡಬಲ್ ಚಾರ್ಜ್ ಕೊಡುವಂತೆ ಕೇಳಿದ ಚಾಲಕನೊಂದಿಗೆ ಗಲಾಟೆ ಆರಂಭಿಸಿದ್ದಾರೆ. ಈಗ ರಾತ್ರಿಯಾಗಿದ್ದು, ಡಬಲ್ ಚಾರ್ಜ್ ಕೊಡುವಂತೆ ಹೇಳಿದಾಗ, ಚಾರ್ಜ್ ಕೊಡಲು ಒಪ್ಪದ ಪ್ರಯಾಣಿಕರ ಮೇಲೆ ಆಟೋ ಚಾಲಕ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಇಬ್ಬರು ಪ್ರಯಾಣಿಕರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದು, ಘಟನೆಯಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಮತ್ತೊರ್ವನಿಗೆ ಗಂಭೀರ ಗಾಯವಾಗಿದೆ. ಈ ಸಂಬಂಧ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.