ಯಲಹಂಕ ಶಾಸಕರ ಹತ್ಯೆಗೆ ಸ್ಕೆಚ್
ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸಂಚು ರೂಪಿಸಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗವಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪ್ರತಿಕ್ರಿಯಿಸಿದ್ದು, ಸಿಸಿಬಿಯಲ್ಲಿ ವಿಚಾರಣೆ ನಡೆಯುತ್ತಿದೆ, ನಮ್ಮ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.