ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ಮುರುಘಾ ಶ್ರೀ ವಜಾ

ಭಾನುವಾರ, 4 ಸೆಪ್ಟಂಬರ್ 2022 (13:49 IST)
ಚಿತ್ರದುರ್ಗ : ಪೊಕ್ಸೋ ಕೇಸ್ನಡಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಶ್ರೀಗಳನ್ನು ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹೊಳೆಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಗ್ರಾಮದಲ್ಲಿರುವ ಅನಾಥ ಸೇವಾಶ್ರಮದಲ್ಲಿ ಮುರುಘಾ ಶ್ರೀಗಳು ಅಧ್ಯಕ್ಷರಾಗಿದ್ದರು.

ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅನಾಥ ಸೇವಾಶ್ರಮ ವಿಶ್ವಸ್ತ ಸಮಿತಿಯು ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರುವುದಾಗಿ ತಿಳಿಸಿದೆ. ಈ ಬಗ್ಗೆ ಗೌರವ ಕಾರ್ಯದರ್ಶಿ ಪ್ರೊ. ಕೆ. ಇ ರಾಧಾಕೃಷ್ಣ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಜೊತೆಗೆ ವಿಶ್ವಸ್ತ ಸಮಿತಿಯ ಸದಸ್ಯತ್ವದಿಂದಲೂ ಮುರುಘಾ ಶ್ರೀ ಅಮಾನತು ಮಾಡಿರುವುದಾಗಿ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ